My Blog List

Monday 6 March 2017

ಕಂಪಲಾಪುರದಲ್ಲಿ ವಿಜ್ಞಾನ ದಿನಾಚರಣೆ ಕಂಪು

ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
 ಅಂತೆಯೇ, ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದಾಗ ಕಂಡು ಬಂದ ದೃಶ್ಯಗಳಿವು. ಶಾಲೆಯಲ್ಲಿ ವಿಜ್ಞಾನ ದಿನ ಆಚರಿಸಲು ಸಿದ್ಧತೆ ನಡೆದಿದ್ದವು. ಸರ್ ಸಿ.ವಿ.ರಾಮನ್ ವಿಜ್ಞಾನ ಸಂಘದ ಹೆಸರಲ್ಲಿ ಶಾಲೆಯಲ್ಲಿರುವ ಸಂಘವು ಹಲವು ನಾವಿನ್ಯಯುತ ಚಟುವಟಿಕೆಗಳನ್ನು ಆಚರಿಸುತ್ತಿದೆ. 
 ಶಾಲೆಯ ಕ್ರಿಯಾಶೀಲ ಶಿಕ್ಷಕಿ ಕಲ್ಪನಾ ರವರು ಈ ಎಲ್ಲಾ ಕಾರ್ಯಕ್ರಮಗಳ ಹಿಂದಿದ್ದು, ಮಕ್ಕಳಲ್ಲಿವಿಜ್ಞಾನದಲ್ಲಿ ಹೆಚ್ಚು ಆಸಕ್ತಿಯನ್ನು ಕೆರಳಿಸುವ ನಿಟ್ಟಿನಲ್ಲಿ ಮಕ್ಕಳೊಂದಿಗೆ ತೊಡಗಿಸಿಕೊಂಡಿದ್ದು ಕಂಡು ಬಂದಿತು
 ಸ್ವತಃ ಮಕ್ಕಳೇ ಈ ಎಲ್ಲ ಮಾದರಿಗಳನ್ನು ಶಿಕ್ಷಕರ ಸಹಕಾರದಿಂದ ಮಾಡಿರುವುದು ವಿಶೇಷವಾಗಿತ್ತು.



NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ

     NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು  ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...